
ಕೇಂದ್ರ ಗೃಹ ಸಚಿವ ಅಮಿತ್ ಷಾ ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದು, ಜೂನ್ 25, 1975 ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ತಮ್ಮ ಸರ್ವಾಧಿಕಾರತ್ವವನ್ನು ಪ್ರದರ್ಶಿಸಿದ್ದರು. ಈ ಮೂಲಕ ಮಾಧ್ಯಮ ಸೇರಿದಂತೆ ಎಲ್ಲರ ಧ್ವನಿ ಅಡಗಿಸಿದ್ದರು. ಇಂತಹ ಕರಾಳ ದಿನವನ್ನು ಈಗ ಸಂವಿಧಾನ ಹತ್ಯಾ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.
ಪ್ರತಿ ವರ್ಷ ಜೂನ್ 25ರಂದು ತುರ್ತು ಪರಿಸ್ಥಿತಿ ವಿರೋಧಿಸಿ ಹೋರಾಟ ಮಾಡಿದ ಮಹನೀಯರನ್ನು ಸ್ಮರಿಸುವುದರ ಜೊತೆಗೆ ತುರ್ತು ಪರಿಸ್ಥಿತಿ ಕಾರಣಕ್ಕೆ ಉದ್ಭವಿಸಿದ ಸಮಸ್ಯೆಗಳನ್ನು ಸಹ ನೆನೆಯಲಾಗುತ್ತದೆ.