ಪ್ರಧಾನ ಮಂತ್ರಿ ‘ಉಜ್ವಲ’ ಯೋಜನೆ ಅಡಿ ಉಚಿತ ಅಡುಗೆ ಅನಿಲ ಸಂಪರ್ಕ ಪಡೆಯಲು ಬಯಸುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಮತ್ತೆ 75 ಲಕ್ಷ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಬುಧವಾರದಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದ್ದು, ಈ ಯೋಜನೆ ಸಲುವಾಗಿ 1,650 ಕೋಟಿ ರೂಪಾಯಿ ಮೀಸಲಿಡುವ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಲಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿ 2026 ಮಾರ್ಚ್ ವೇಳೆಗೆ ದೇಶದ 75 ಲಕ್ಷ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಒದಗಿಸಲು ಈ ಹಣವನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.