ನವದೆಹಲಿ: ಕೊರೋನಾ ಸೋಂಕು ಭಾರಿ ಏರಿಕೆ ಹಿನ್ನಲೆಯಲ್ಲಿ ಸರ್ಕಾರಿ ಕಚೇರಿಗಳಿಗಾಗಿ ಕೇಂದ್ರವು ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಅಂಡರ್ ಸೆಕ್ರೆಟರಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು ಶೇಕಡ 50 ರಷ್ಟು ನಿರ್ಬಂಧಿಸಲಾಗಿದೆ, ಉಳಿಕೆ ಸಿಬ್ಬಂದಿ ಮನೆಯಿಂದ ಕೆಲಸ ಮಾಡಲು ಸೂಚಿಸಲಾಗಿದೆ.
ವಿಕಲೇತನರು ಮತ್ತು ಗರ್ಭಿಣಿ ಉದ್ಯೋಗಿಗಳಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ ಕೇಂದ್ರದಿಂದ ಈ ಆದೇಶ ಹೊರಡಿಸಿದೆ.
ಕಂಟೈನ್‌ಮೆಂಟ್ ವಲಯಗಳನ್ನು ಡಿ-ನೋಟಿಫೈ ಮಾಡುವವರೆಗೆ ಕೋವಿಡ್ ಕಂಟೈನ್‌ಮೆಂಟ್ ವಲಯಗಳಲ್ಲಿ ವಾಸಿಸುವ ಕೇಂದ್ರ ಸರ್ಕಾರಿ ಅಧಿಕಾರಿಗಳು/ಸಿಬ್ಬಂದಿಗೆ ಕಚೇರಿಗೆ ಬರುವುದರಿಂದ ವಿನಾಯಿತಿ ನೀಡಲಾಗಿದೆ.
ಸರ್ಕಾರಿ ಅಧಿಕಾರಿಗಳು/ಸಿಬ್ಬಂದಿಗಳು ಕಚೇರಿಯಲ್ಲಿ ಜನಸಂದಣಿಯನ್ನು ತಪ್ಪಿಸಲು ಕೇಂದ್ರವು ತನ್ನ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿದೆ.
ಅಲ್ಲದೇ, ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದು ಮಾಡಲಾಗಿದೆ. ಕೊರೋನಾ ಸೋಂಕು ಏರಿಕೆಯಾದ ಕಾರಣದಿಂದಾಗಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ಬಯೋಮೆಟ್ರಿಕ್ ಹಾಜರಾತಿ ರದ್ದು ಮಾಡಲಾಗಿದೆ.