ಕೇಂದ್ರ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ. ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಉದ್ಯೋಗಿಗಳು ಒತ್ತಾಯಿಸುತ್ತಿರುವ ಮಧ್ಯೆ ಹೊಸ ಸೂತ್ರ ಒಂದನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಈ ನಿಟ್ಟಿನಲ್ಲಿ ಪರಿಶೀಲಿಸುವಂತೆ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ವರ್ಷ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಟಿ.ವಿ. ಸೋಮನಾಥನ್ ನೇತೃತ್ವದ ಸಮಿತಿಯೊಂದನ್ನು ರಚಿಸಿದ್ದು, ತನ್ನ ವರದಿಯನ್ನು ಸಿದ್ಧಪಡಿಸಿದೆ ಎಂದು ಹೇಳಲಾಗಿದೆ.
ಇದರನ್ವಯ ಪಿಂಚಣಿಯ ಗ್ಯಾರಂಟಿಯಾಗಿ ನೌಕರರು ತಮ್ಮ ನಿವೃತ್ತಿಯ ಸಂದರ್ಭದಲ್ಲಿ ಪಡೆಯುವ ಕಡೆಯ ವೇತನದ ಅರ್ಧದಷ್ಟನ್ನು ಪಿಂಚಣಿಯಾಗಿ ನೀಡಲು ಶಿಫಾರಸ್ಸು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಒಂದೊಮ್ಮೆ ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದರೆ ಕಡೆಯ ವೇತನದ ಶೇಕಡ 50ರಷ್ಟು ಪಿಂಚಣಿಯಾಗಿ ನೌಕರರು ಪಡೆಯಲಿದ್ದಾರೆ.