
ನವದೆಹಲಿ: 24 ವಾರದವರೆಗೂ ಗರ್ಭಿಣಿಯರ ಗರ್ಭಪಾತಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರದಿಂದ ಹೊಸ ನಿಯಮಗಳ ಅಧಿಸೂಚನೆ ಹೊರಡಿಸಲಾಗಿದೆ.
ಮೆಡಿಕಲ್ ಟರ್ಮಿನೇಶನ್ ಅಫ್ ಪ್ರೆಗ್ನನ್ಸಿ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸೆಪ್ಟಂಬರ್ 24ರಿಂದಲೇ ಅನ್ವಯವಾಗುವಂತೆ ಹೊಸ ಕಾಯ್ದೆ ಜಾರಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಅತ್ಯಾಚಾರ ಸಂತ್ರಸ್ತರು, ಅಪ್ರಾಪ್ತರಿಗೆ ಗರ್ಭಪಾತಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಚ್ಛೇದನ ಮತ್ತು ವಿಧವೆಯರು ಗರ್ಭಪಾತ ಮಾಡಿಸಿಕೊಳ್ಳಬಹುದಾಗಿದೆ. ಮಾನಸಿಕ ಅಸ್ವಸ್ಥ ಮಹಿಳೆಯರಿಗೆ ಗರ್ಭಪಾತಕ್ಕೆ ಅವಕಾಶವಿದೆ. ಹಿಂದೆ 20 ವಾರದವರೆಗೆ ಗರ್ಭಪಾತಕ್ಕೆ ಅವಕಾಶ ನೀಡಲಾಗಿತ್ತು. ಇದನ್ನು 24 ವಾರಗಳಿಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.