ನವದೆಹಲಿ: ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಅಕ್ಕಿಯ ದೇಶೀಯ ಬೆಲೆಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಅಕ್ಕಿ ಚಿಲ್ಲರೆ ಬೆಲೆಗಳು ಒಂದು ವರ್ಷದಲ್ಲಿ 11 ಪ್ರತಿಶತದಷ್ಟು ಹೆಚ್ಚಾಗಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯವು, ಕಳೆದ ವರ್ಷ ಆಗಸ್ಟ್ ನಲ್ಲಿ ಬೆಲೆಯನ್ನು ಕಡಿಮೆ ಮಾಡಲು ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯ ಮೇಲೆ ಶೇಕಡ 20 ರ ರಫ್ತು ಸುಂಕ ವಿಧಿಸಲಾಯಿತು.
ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯು ದೇಶದಿಂದ ರಫ್ತಾಗುವ ಒಟ್ಟು ಅಕ್ಕಿಯ ಶೇಕಡಾ 25 ರಷ್ಟಿದೆ. ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯ ರಫ್ತಿನ ಮೇಲಿನ ನಿಷೇಧವು ದೇಶದ ಗ್ರಾಹಕರಿಗೆ ಬೆಲೆಯಲ್ಲಿ ಇಳಿಕೆಗೆ ಕಾರಣವಾಗುತ್ತದೆ ಎಂದು ಸಚಿವಾಲಯ ಹೇಳಿದೆ.
ಆದಾಗ್ಯೂ, ಬೃಹತ್ ಪ್ರಮಾಣದ ಅಕ್ಕಿ ರಫ್ತುಗಳನ್ನು ರೂಪಿಸುವ ಬಾಸ್ಮತಿ ಅಲ್ಲದ ಅಕ್ಕಿಯ ರಫ್ತು ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಾಭದಾಯಕ ಬೆಲೆಯ ಲಾಭವನ್ನು ರೈತರು ಪಡೆಯುವುದನ್ನು ಇದು ಖಚಿತಪಡಿಸುತ್ತದೆ ಎಂದು ಸಚಿವಾಲಯ ಹೇಳಿದೆ.