ನವದೆಹಲಿ: ಮನೆ ಬಾಗಿಲಿಗೆ ಪಡಿತರ ಪೂರೈಸುವ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿದೆ ಎಂಬ ಆರೋಪ ಕೇಳಿಬಂದಿದೆ.
ದೆಹಲಿಯಲ್ಲಿ ಜನರ ಮನೆಬಾಗಿಲಿಗೆ ಪಡಿತರ ಪೂರೈಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಯೋಜನೆ ರೂಪಿಸಿ ಜಾರಿಗೊಳಿಸಲು ಮುಂದಾಗಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿದೆ ಎಂದು ದೂರಲಾಗಿದೆ.
ಮನೆಬಾಗಿಲಿಗೆ ಪಡಿತರ ವಿತರಿಸುವ ಯೋಜನೆ ಜಾರಿಗೊಳಿಸಲು ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ತಡೆ ನೀಡಿದೆ ಎನ್ನಲಾಗಿದೆ. ಮುಂದಿನ ವಾರದಿಂದ ಮನೆಬಾಗಿಲಿಗೆ ಪಡಿತರ ಪೂರೈಸಲು ದೆಹಲಿ ಸರ್ಕಾರ ಮುಂದಾಗಿತ್ತು. ಇದಕ್ಕೆ ಕೇಂದ್ರ ಸರ್ಕಾರ ತಡೆ ನೀಡಿದೆ ಎಂದು ನಾಯಕರು ದೂರಿದ್ದಾರೆ.