ಖಾಸಗಿ ಮತ್ತು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದ್ದು, ಇದರ ಮಧ್ಯೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಲಭ್ಯವಿರುವ ಸೀಟುಗಳ ಪಟ್ಟಿಯನ್ನು ಪ್ರಕಟಿಸಿದೆ.
ಈ ಬಾರಿ ಸರ್ಕಾರಿ ಕೋಟಾದಡಿ ಒಟ್ಟು 54,434 ಸೀಟ್ ಗಳು ಲಭ್ಯವಿದ್ದು, ಈ ಪೈಕಿ 6770 ಸೀಟುಗಳು ಹೈದರಾಬಾದ್ ಕರ್ನಾಟಕ ಕೋಟಾದ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.
ಇನ್ನುಳಿದ 47,664 ಸೀಟುಗಳು ಸಾಮಾನ್ಯ ಕೋಟಾದಡಿ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಸಿಇಟಿ) ಸೀಟು ಹಂಚಿಕೆ ಪ್ರಕ್ರಿಯೆಯನ್ನು ಆರಂಭಿಸಿದೆ.