ಇತ್ತೀಚೆಗಷ್ಟೇ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಇದರ ಜೊತೆಗೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ಸಿಇಟಿ ಪರೀಕ್ಷೆ ಮೇ 20 ಮತ್ತು 21 ರಂದು ನಡೆಯಲಿದೆ.
ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಮಹತ್ವದ ಮಾಹಿತಿ ಒಂದನ್ನು ನೀಡಿದ್ದು, ಪಿಯು ಪರೀಕ್ಷೆಯಲ್ಲಿ ನಿರೀಕ್ಷೆಗಂತ ಕಡಿಮೆ ಅಂಕ ಬಂದಿದೆ ಎಂಬ ಕಾರಣಕ್ಕೆ ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳೂ ಸಹ ಸಿಇಟಿ ಪರೀಕ್ಷೆಗೆ ಹಾಜರಾಗಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಪೋಷಕರು ಅಥವಾ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಹೇಳಿರುವ ಅವರು, ಸಿಇಟಿ ಪರೀಕ್ಷೆಗೆ ಹಾಜರಾದರೆ ಮಾತ್ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಅಂಕಗಳನ್ನು ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ. ಹೀಗಾಗಿ ಮೇ 20 ಮತ್ತು 21 ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದ್ದಾರೆ.