ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಮೇ 11 ರಿಂದ ಮೇ 13ರ ವರೆಗೆ ಅವಕಾಶವಿದೆ.
ಮೇ 11 ರ ಬೆಳಿಗ್ಗೆ 8 ಗಂಟೆಯಿಂದ ಮೇ 13ರ ಬೆಳಿಗ್ಗೆ 11 ಗಂಟೆಯವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಅವಕಾಶವಿದ್ದು, ಶುಲ್ಕ ಪಾವತಿಗೆ ಅಂದು ಸಂಜೆ 6 ಗಂಟೆಯ ತನಕ ಕೊನೆಯ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
ಪೋಷಕರು ಹಾಗೂ ವಿದ್ಯಾರ್ಥಿಗಳ ಮನವಿ ಮೇರೆಗೆ ಈಗ ಮತ್ತೊಂದು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿರುವ ಅವರು, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿಎಸ್ಸಿ (ನರ್ಸಿಂಗ್) ಮೊದಲಾದ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರ ವೆಬ್ಸೈಟ್ http://kea.kar.nic.in ಗೆ ಭೇಟಿ ನೀಡಬಹುದಾಗಿದೆ.