alex Certify ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಆನ್ಸರ್ ಬಿಡುಗಡೆ, ಆಕ್ಷೇಪಣೆ ಇದ್ದಲ್ಲಿ ಸೆ. 4 ರೊಳಗೆ ಸಲ್ಲಿಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಆನ್ಸರ್ ಬಿಡುಗಡೆ, ಆಕ್ಷೇಪಣೆ ಇದ್ದಲ್ಲಿ ಸೆ. 4 ರೊಳಗೆ ಸಲ್ಲಿಕೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇತ್ತೀಚೆಗಷ್ಟೆ ನಡೆಸಲಾಗಿದ್ದ ಸಿಇಟಿ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.

ಕೀ ಆನ್ಸರ್ ಪರಿಶೀಲಿಸಿ ಆಕ್ಷೇಪಣೆಗಳಿದ್ದಲ್ಲಿ ಸೆ. 4 ರೊಳಗೆ ಸಲ್ಲಿಸಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಭೇಟಿ ನೀಡಿ ಉತ್ತರಗಳನ್ನು ಪರಿಶೀಲಿಸಿ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ತಿಳಿಸಲಾಗಿದೆ.

ಇನ್ನು ಸಿಇಟಿ ಪರೀಕ್ಷೆ ಮುಗಿದ ನಂತರವೂ ಅರ್ಜಿ ಸಲ್ಲಿಸುವ ವೇಳೆ ಅಭ್ಯರ್ಥಿಗಳು ತಪ್ಪು ಮಾಡಿಕೊಂಡಿದ್ದಲ್ಲಿ ಸರಿಪಡಿಸಿಕೊಳ್ಳಲು ಸೆ. 5 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎನ್ನಲಾಗಿದ್ದು, ಮಾಹಿತಿಗಾಗಿ ವೆಬ್ ಸೈಟ್ ಗಮನಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...