
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿಗೆ 1.8 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಿದೆ.
ಈ ಮೊದಲು ಅರ್ಜಿ ಸಲ್ಲಿಕೆಗೆ ಮೇ 5 ಕೊನೆಯ ದಿನವಾಗಿತ್ತು. ದಿನಾಂಕ ವಿಸ್ತರಿಸಿದ್ದರೂ ಕೊನೆಯ ದಿನಾಂಕದ ಬಗ್ಗೆ ಪ್ರಾಧಿಕಾರ ತಿಳಿಸಿಲ್ಲ. ಜೂನ್ 16 ರಿಂದ 18 ರವರೆಗೆ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು.
ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯಕೀಯ, ಪಶುಸಂಗೋಪನೆ, ಫಾರ್ಮಾ ಕೋರ್ಸ್, ಕೃಷಿ ವಿಜ್ಞಾನ ಕೋರ್ಸ್ ಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗುವುದು.