
ಬೆಂಗಳೂರು: ಯುಜಿ ಸಿಇಟಿ ಮತ್ತು ಯುಜಿ ನೀಟ್ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಪ್ರವೇಶ ಪ್ರಕ್ರಿಯೆ ಮುಗಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ದಿನಾಂಕ ವಿಸ್ತರಿಸಿದೆ.
ಸಿಇಟಿ ಸೀಟು ಪಡೆದವರು ಆಯ್ಕೆ ದಾಖಲಿಸಲು ಸೆ. 26ರ ವರೆಗೆ, ಶುಲ್ಕ ಪಾವತಿ ಮತ್ತು ದಾಖಲೆ ಸಲ್ಲಿಕೆಗೆ ಸೆ. 27ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆಪ್ಟೆಂಬರ್ 28 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಆಯ್ಕೆ ದಾಖಲೆಗೆ ಅವಕಾಶ ಇಲ್ಲ. ಆದರೆ ಶುಲ್ಕ ಪಾವತಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಇದೇ ದಿನಾಂಕಗಳು ಅನ್ವಯವಾಗುತ್ತವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.