alex Certify ಇಂಜಿನಿಯರಿಂಗ್ ಪ್ರವೇಶಕ್ಕೆ ಸಿಇಟಿ ಕೌನ್ಸೆಲಿಂಗ್ ಮುಗಿದ ನಂತರ ಕಾಮೆಡ್ -ಕೆ ಕೌನ್ಸೆಲಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜಿನಿಯರಿಂಗ್ ಪ್ರವೇಶಕ್ಕೆ ಸಿಇಟಿ ಕೌನ್ಸೆಲಿಂಗ್ ಮುಗಿದ ನಂತರ ಕಾಮೆಡ್ -ಕೆ ಕೌನ್ಸೆಲಿಂಗ್

ಬೆಂಗಳೂರು: ಇಂಜಿನಿಯರಿಂಗ್ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೌನ್ಸೆಲಿಂಗ್ ಮುಗಿದ ನಂತರ ಕಾಮೆಡ್ –ಕೆ  ಕೌನ್ಸೆಲಿಂಗ್ ನಡೆಸುವಂತೆ ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ರಾಜ್ಯದ ಖಾಸಗಿ ಅನುದಾನ ರಹಿತ ಇಂಜಿನಿಯರಿಂಗ್ ಕಾಲೇಜುಗಳ ಸಂಘಕ್ಕೆ ಉನ್ನತ ಶಿಕ್ಷಣ ಇಲಾಖೆಯಿಂದ ಈ ಕುರಿತಾಗಿ ಸೂಚನೆ ನೀಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಖಾಸಗಿ ಅನುದಾನ ರಹಿತ ಇಂಜಿನಿಯರಿಂಗ್ ಕಾಲೇಜುಗಳ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಈ ಕುರಿತಾಗಿ ಸೂಚನೆ ನೀಡಿದ್ದಾರೆ.

ಸಿಇಟಿ ಕೌನ್ಸೆಲಿಂಗ್ ಮತ್ತು ಕಾಮೆಡ್ -ಕೆ ಕೌನ್ಸೆಲಿಂಗ್ ಗೆ ದಿನಾಂಕ ನಿಗದಿಪಡಿಸುವ ಕುರಿತಂತೆ ಸೆಪ್ಟೆಂಬರ್ 13 ರಂದು ಮತ್ತೊಂದು ಸಭೆ ನಡೆಸಲಾಗುವುದು. ಸಿಇಟಿ ರ‍್ಯಾಂಕಿಂಗ್ ಬಗ್ಗೆ ಉಂಟಾಗಿರುವ ಬಿಕಟ್ಟಿನ ಬಗ್ಗೆ ಖಾಸಗಿ ಅನುದಾನ ರಹಿತ ಎಂಜಿನಿಯರಿಂಗ್ ಕಾಲೇಜುಗಳ ಪ್ರತಿನಿಧಿಗಳಿಗೆ ಸಚಿವರು ವಿವರ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...