ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ವಿವಿಧ ಇಂಜಿನಿಯರಿಂಗ್ ಕೋರ್ಸ್ ಗಳ ಜೊತೆಗೆ ಈ ಬಾರಿ ಭವಿಷ್ಯದ ಕೋರ್ಸ್ ಗಳನ್ನು ಆರಂಭಿಸಲಾಗಿದೆ.
ಕಡಿಮೆ ವೆಚ್ಚದಲ್ಲಿ ಕೋರ್ಸ್ ಗಳು ಲಭ್ಯವಿವೆ. ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆದುಕೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ 18 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ 3730 ಸೀಟುಗಳಿವೆ. ಬೀದರ್ ಮತ್ತು ನರಗುಂದದಲ್ಲಿ ಹೊಸ ಕಾಲೇಜುಗಳಿಗೆ ಸಿಎಸ್, ಎಐ, ಡಿಎಸ್ ಕೋರ್ಸ್ ಗಳ ಪ್ರವೇಶಕ್ಕೆ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಅನುಮತಿ ನೀಡಿದೆ.
ಭವಿಷ್ಯದ ಕೋರ್ಸ್ ಗಳು ಸರ್ಕಾರಿ ಶುಲ್ಕ ಕೇವಲ 38,200 ರೂಪಾಯಿಯಲ್ಲಿ ಲಭ್ಯವಿದೆ. ಸಿಇಟಿಯಲ್ಲಿ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು ಕಡಿಮೆ ವೆಚ್ಚದಲ್ಲಿ ಕೋರ್ಸ್ ಪೂರ್ಣಗೊಳಿಸಿಕೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ. ಅ. 28 ರಂದು ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು.