alex Certify BIG BREAKING NEWS: ಸಿಇಟಿ ಪರೀಕ್ಷೆ ಮುಂದೂಡಿಕೆ, ಆಗಸ್ಟ್ ನಲ್ಲಿ ನಡೆಯಲಿದೆ ಸಾಮಾನ್ಯ ಪ್ರವೇಶ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಸಿಇಟಿ ಪರೀಕ್ಷೆ ಮುಂದೂಡಿಕೆ, ಆಗಸ್ಟ್ ನಲ್ಲಿ ನಡೆಯಲಿದೆ ಸಾಮಾನ್ಯ ಪ್ರವೇಶ ಪರೀಕ್ಷೆ

 ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ ಮಾಡಿದ್ದು, ಈಗ ಸಿಇಟಿ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ.

ಜುಲೈ 7 ಮತ್ತು 8 ರಂದು ಸಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ದಿನಾಂಕವನ್ನು ಪರಿಷ್ಕರಣೆ ಮಾಡಲಾಗಿದ್ದು, ಆಗಸ್ಟ್ 28 ಮತ್ತು 29 ರಂದು ಸಿಇಟಿ ಪರೀಕ್ಷೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ಆಗಸ್ಟ್ 28 ರಂದು ಜೀವ ವಿಜ್ಞಾನ, ಗಣಿತ

ಆಗಸ್ಟ್ 29 ರಂದು ಭೌತ ವಿಜ್ಞಾನ, ರಸಾಯನ ವಿಜ್ಞಾನ

ಆಗಸ್ಟ್ 30 ರಂದು ಕನ್ನಡ ವಿಷಯದ ಪರೀಕ್ಷೆಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ http://kea.kar.nic.in ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...