
ಬೆಂಗಳೂರು: ಅಕ್ಟೋಬರ್ ನಿಂದ ಪದವಿ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಅಕ್ಟೋಬರ್ ಮೊದಲ ವಾರದಲ್ಲಿ ದಾಖಲಾತಿ ಶುರುವಾಗಲಿದೆ. ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ಕೈಬಿಟ್ಟ ಸರ್ಕಾರ ನೇರವಾಗಿ ದಾಖಲಾಗಲು ಅವಕಾಶ ಕಲ್ಪಿಸಿದೆ.
ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿವಿ ಕುಲಪತಿಗಳಿಗೆ ಡಿಸಿಎಂ ಸೂಚನೆ ನೀಡಿದ್ದು, ಅಕ್ಟೋಬರ್ ಮೊದಲ ವಾರದಿಂದ 2021 – 22 ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಬಿಎಸ್ಸಿ ಪ್ರವೇಶಕ್ಕೆ ಸಿಇಟಿ ಚಿಂತನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಹೇಳಲಾಗಿದೆ.