ಬೆಂಗಳೂರು: ಈ ಶೈಕ್ಷಣಿಕ ಸಾಲಿನಿಂದಲೇ 4 ವರ್ಷದ ಪದವಿ ಕೋರ್ಸ್ ಆರಂಭವಾಗಲಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸು ರಾಜ್ಯದಲ್ಲಿ ಜಾರಿಗೆ ಬರಲಿದ್ದು, ಆನ್ಲೈನ್ ಜೊತೆಗೆ ಆಫ್ಲೈನ್ ಪಾಠಕ್ಕೆ ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಲಹೆ ನೀಡಿದ್ದಾರೆ.
ರಾಜ್ಯದ ಎಲ್ಲಾ ವಿವಿಗಳ ಕುಲಪತಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಎಲ್ಲ ವಿದ್ಯಾರ್ಥಿಗಳು ಪಾಸ್ ಆಗಿರುವುದರಿಂದ ವಿವಿಧ ಕೋರ್ಸುಗಳಿಗೆ ಬೇಡಿಕೆ ಬರುತ್ತಿದೆ. 4 ವರ್ಷದ ಪದವಿ ತರಗತಿಗಳನ್ನು ಆರಂಭಿಸಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ತಿಳಿಸಲಾಗಿದೆ ಎಂದರು.
ರಾಜ್ಯದ ಎಲ್ಲಾ ವಿವಿಗಳು ಹಾಗೂ ಕಾಲೇಜುಗಳಲ್ಲಿ ಏಕರೂಪದ ವೇಳಾಪಟ್ಟಿ ಅಳವಡಿಸಿಕೊಳ್ಳುವ ಪ್ರಾಯೋಗಿಕ ವ್ಯವಸ್ಥೆಗೆ ಈ ವರ್ಷ ಚಾಲನೆ ನೀಡಲಿದ್ದು, ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ಇರುವುದಿಲ್ಲ ಎಂದು ಹೇಳಲಾಗಿದೆ.