ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶ ಬಯಸಿ ನಿಗದಿತ ದಿನಗಳಂದು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ಮುಗಿಸದ ಅಭ್ಯರ್ಥಿಗಳು ಜುಲೈ 21 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಹಾಜರಾಗಬಹುದಾಗಿದೆ.
ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಜುಲೈ 21ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ದಾಖಲಾತಿಗಳ ಆಫ್ ಲೈನ್ ಪರಿಶೀಲನೆ ನಡೆಸಲಾಗುವುದು.
ಆರ್ಕಿಟೆಕ್ಚರ್ ವಿಭಾಗದಲ್ಲಿ ರ್‍ಯಾಂಕ್ ಪಡೆದು ದಾಖಲಾತಿ ಪರಿಶೀಲನೆ ಪೂರ್ಣಗೊಳಿಸದಿರುವವರಿಗೂ ಇದು ಅನ್ವಯವಾಗಲಿದೆ. ದಾಖಲಾತಿಗಳ ಪರಿಶೀಲನೆಗೆ ಬರುವ ಅಭ್ಯರ್ಥಿಗಳು ಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕ್ಲೇಮ್ ಮಾಡಿರುವ ಎಲ್ಲಾ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.