
ಬೆಂಗಳೂರು: ಸಿಇಟಿ ದಾಖಲಾತಿ ಪರಿಶೀಲನೆಗೆ ಒಳಪಡದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. 2022 ನೇ ಸಾಲಿನ ಸಿಇಟಿ ದಾಖಲಾತಿ ಪರಿಶೀಲನೆಗೆ ಅಕ್ಟೋಬರ್ 11 ರಂದು ಕೊನೆಯ ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಕಚೇರಿಗೆ ಆಗಮಿಸಿ ತಮ್ಮ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳಬಹುದಾಗಿದೆ. ದಾಖಲಾತಿ ಪರಿಶೀಲನೆಗೆ ಇದು ಕೊನೆಯ ಅವಕಾಶವಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಡಿಪ್ಲೊಮಾ ಪೂರ್ಣಗೊಳಿಸಿದವರ ಪ್ರವೇಶಕ್ಕೆ ದಿನಾಂಕ ವಿಸ್ತರಣೆ
ಡಿಪ್ಲೋಮಾ ಪೂರ್ಣಗೊಳಿಸಿದ ಅರ್ಹ ವಿದ್ಯಾರ್ಥಿಗಳು ನೇರವಾಗಿ ಇಂಜಿನಿಯರಿಂಗ್ ಎರಡು ಅಥವಾ ಮೂರನೇ ಸೆಮಿಸ್ಟರ್ ಗೆ ಪ್ರವೇಶ ಪಡೆಯಲು ನಡೆಯುವ ಪ್ರಸಕ್ತ ಸಾಲಿಗೆ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ. ಮಾಹಿತಿಗಾಗಿ http//kea.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.