ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ.
ಸಿಇಟಿ ಪರೀಕ್ಷೆಯ ಪ್ರವೇಶ ಪತ್ರಗಳು ಡೌನ್ಲೋಡ್ ಆಗುತ್ತಿಲ್ಲ ಎಂದು ಅನೇಕ ಅಭ್ಯರ್ಥಿಗಳು ಸೋಮವಾರ ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕಚೇರಿ ಎದುರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಹುತೇಕ ಸಿಇಟಿ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಡೌನ್ಲೋಡ್ ಆಗಿವೆ. ವೈದ್ಯಕೀಯ ಕೋರ್ಸ್ ಗಳ ಆಕಾಂಕ್ಷಿಗಳು ಕೂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಕೊಂಡಿರುವುದರಿಂದ ಅದರಲ್ಲಿ ಯುಜಿ ನೀಟ್ ಮಾತ್ರ ತೆಗೆದುಕೊಂಡವರಿಗೆ ಸಿಇಟಿ ಪ್ರವೇಶ ಪತ್ರ ಡೌನ್ಲೋಡ್ ಆಗುತ್ತಿಲ್ಲ. ಅಂತಹ ಅಭ್ಯರ್ಥಿಗಳಿಗೆ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಸಿಇಟಿ ಪರೀಕ್ಷೆಗೆ ಅವಕಾಶ ಇರುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ರಮ್ಯಾ ಅವರು ಸ್ಪಷ್ಟಪಡಿಸಿದ್ದಾರೆ.