ಬೆಂಗಳೂರು: ಸಿಇಟಿ ವಿದ್ಯಾರ್ಥಿಗಳಿಗೆ ಪಿಯುಸಿ ಅಂಕ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ.
ಪ್ರಸಕ್ತ ಸಾಲಿನ ಸಿಇಟಿ ಬರೆದ ವಿದ್ಯಾರ್ಥಿಗಳ ಪೈಕಿ 2023ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾದ ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಿಬಿಎಸ್‌ಸಿ, ಐಸಿಎಸ್‌ಸಿ ಸೇರಿ ಇನ್ನಿತರ ಮಂಡಳಿಗಳ ವಿದ್ಯಾರ್ಥಿಗಳು ತಮ್ಮ 12ನೇ ತರಗತಿ ಅಂಕಗಳನ್ನು ಆನ್ಲೈನ್ ಮೂಲಕ ದಾಖಲಿಸಲು ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.
ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಸಿಇಟಿ ಅಂಕಗಳು ಮತ್ತು ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ರ್ಯಾಂಕಿಂಗ್ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಪ್ರತಿ ವಿದ್ಯಾರ್ಥಿಗಳು ತಮ್ಮ 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಂಕಗಳನ್ನು ಆನ್ಲೈನ್ ಮೂಲಕ ದಾಖಲಿಸಬೇಕು. ಇವರಲ್ಲಿ 2023ರಲ್ಲಿ ಪಿಯುಸಿ ಪಾಸ್ ಆಗಿರುವ ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳ ಅಂಕಗಳನ್ನು ನೇರವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪಡೆದುಕೊಳ್ಳಲಾಗುವುದು. ಮೇ 31 ಅಂಕ ದಾಖಲಿಸಲು ಕೊನೆಯ ದಿನವಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.