alex Certify ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಮುಗಿದ ನಂತರ ಅರ್ಜಿ ತಿದ್ದುಪಡಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಮುಗಿದ ನಂತರ ಅರ್ಜಿ ತಿದ್ದುಪಡಿಗೆ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18ರಿಂದ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು, ನಂತರ ಅಭ್ಯರ್ಥಿಗಳ ಅರ್ಜಿಗಳ ತಿದ್ದುಪಡಿಗೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ಈಗಾಗಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅನೇಕ ಅಭ್ಯರ್ಥಿಗಳು ಅರ್ಜಿ ತಿದ್ದುಪಡಿಗಾಗಿ ಕೋರಿಕೆ ಸಲ್ಲಿಸುತ್ತಿದ್ದಾರೆ. ಈ ಹಂತದಲ್ಲಿ ಅರ್ಜಿಗಳ ತಿದ್ದುಪಡಿಗೆ ಅವಕಾಶ ನೀಡುವುದಿಲ್ಲ. ಏಪ್ರಿಲ್ 18, 19, 20 ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಆನಂತರವೇ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗುತ್ತದೆ. ಈ ಸಂಬಂಧ ಸದ್ಯದಲ್ಲಿಯೇ ದಿನಾಂಕ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...