ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಆಗಸ್ಟ್ 28, 29 ರಂದು ಸಿಇಟಿ ನಡೆಯಲಿದೆ. ಆಗಸ್ಟ್ 30 ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು.
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ. ಸಿಬ್ಬಂದಿಗೆ ಆನ್ಲೈನ್ ತರಬೇತಿ ಕೂಡ ನೀಡಲಾಗಿದ್ದು, ಕೊರೋನಾ ಮಾರ್ಗಸೂಚಿಯನ್ವಯ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ ಫಾರ್ಮಾ ಮೊದಲಾದ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ನಡೆಸಲಿದೆ. ಗಡಿನಾಡು ಮತ್ತು ಹೊರನಾಡು ಕನ್ನಡಿಗ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯನ್ನು ಬರೆಯಬೇಕಿದೆ. ಮೆಡಿಕಲ್, ಡೆಂಟಲ್, ಆಯುರ್ವೇದ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆಯಬೇಕಿದೆ.