alex Certify ನೀಟ್ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ, ಎಕ್ಸಾಂ ಕೈಬಿಡುವ ಯೋಜನೆ ಇಲ್ಲವೆಂದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀಟ್ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ, ಎಕ್ಸಾಂ ಕೈಬಿಡುವ ಯೋಜನೆ ಇಲ್ಲವೆಂದ ಸರ್ಕಾರ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಹಾಗೂ ಇತರೆ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಿಗದಿಯಂತೆ ನಡೆಯಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಆರೋಗ್ಯ ಇಲಾಖೆ ರಾಜ್ಯ ಸಚಿವೆ. ಡಾ, ಭಾರತಿ ಪ್ರವೀಣ್ ಪವಾರ್ ಶುಕ್ರವಾರ ಲೋಕಸಭೆಗೆ ಈ ಕುರಿತಂತೆ ಮಾಹಿತಿ ನೀಡಿದ್ದು, ನೀಟ್ ಮತ್ತು ಸಿಇಟಿ ಕೈಬಿಡುವ ಯಾವುದೇ ಯೋಜನೆ ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವೈದ್ಯಕೀಯ ಸ್ನಾತಕೋತ್ತರ ಮತ್ತು ಸ್ನಾತಕ ಪದವಿ ನೀಟ್ ಪರೀಕ್ಷೆಗಳು ಈ ವರ್ಷದ ಸೆಪ್ಟೆಂಬರ್ 11 ಮತ್ತು 12 ರಂದು ನಡೆಯಲಿವೆ ಎಂದು ಅವರು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ. ಮಾರ್ಗಸೂಚಿಗಳನ್ನು ಅನುಸರಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನೀಟ್ ಮತ್ತು ಸಿಇಟಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...