ಬೆಂಗಳೂರು: ಸಿಇಟಿ ಪ್ರಶ್ನೆ ಪತ್ರಿಕೆ ಎಡವಟ್ಟಿಗೆ ಕೆಇಎ ಎಂಡಿ ರಾಮ್ಯಾ ಅವರ ತಲೆದಂಡವಾಗಿದೆ. ಕೆಇಎ ಎಂಡಿ ಹುದ್ದೆಯಿಂದ ರಮ್ಯಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸನ್ನ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರಾಗಿದ್ದರು.
ಸಿಇಟಿಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿ ಕೆಇಎ ಎಂಡಿ ರಮ್ಯಾ ವಿವಾದಕ್ಕೀಡಾಗಿದ್ದರು. ಇದರಿಂದ ರಾಜ್ಯ ಸರ್ಕಾರ ತೀವ್ರ ಮುಜುಗರಕ್ಕೀಡಾಗಿತ್ತು. ಕೆಇಎ ಎಂಡಿ ರಮ್ಯಾ ವರ್ಗಾವಣೆಗಾಗಿ ಪೋಷಕರು ಒತ್ತಾಯಿಸಿದ್ದರು. ಪೋಷಕರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ರಮ್ಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.