ಬೆಂಗಳೂರು: ಸಿಇಟಿ ರ‍್ಯಾಂಕ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಈಗಿನ ರ್ಯಾಂಕಿಂಗ್ ಸರಿಯಾಗಿದೆ ಎಂದು ಸರ್ಕಾರ ವಾದ ಮಂಡಿಸಿದೆ.
2020 -21ನೇ ಸಾಲಿನ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯನ್ನೇ ಬರೆದಿಲ್ಲ. ಪರೀಕ್ಷೆ ಬರೆದವರ ಜೊತೆಗೆ ಬರೆಯದವರನ್ನು ಹೋಲಿಸಲಾಗದು. ಹೀಗೆ ಮಾಡಿದರೆ ಮೆರಿಟ್ ವಿದ್ಯಾರ್ಥಿಗಳ ರ‍್ಯಾಂಕ್ ಕುಸಿತವಾಗಲಿದೆ ಎಂದು ಸರ್ಕಾರ ವಾದ ಮಂಡಿಸಿದೆ.
ಕಳೆದ 2020 -21ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 22 ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 ರಂದು ಹೊರಡಿಸಿದ್ದ ಟಿಪ್ಪಣಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಪಡಿಸಿದೆ. ನ್ಯಾಯಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.
2020 -21ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 22ರ ಸಿಇಟಿ ಫಲಿತಾಂಶಕ್ಕೆ ಪರಿಗಣಿಸದಿರುವುದನ್ನು ಪ್ರಶ್ನಿಸಿ ಪುನರಾವರ್ತಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.