ಬೆಂಗಳೂರು: ಜುಲೈ 29 ಅಥವಾ 30ರಂದು ಸಿಇಟಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಸಿಬಿಎಸ್ಇ ಮತ್ತು ಐಸಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಇವುಗಳಲ್ಲಿ ವಿದ್ಯಾರ್ಥಿಗಳು ಪಡೆದ ಫಲಿತಾಂಶದ ವಿಜ್ಞಾನ ವಿಷಯಗಳ ಶೇಕಡ 50ರಷ್ಟು ಅಂಕಗಳನ್ನು ಸಿಇಟಿ ರ‍್ಯಾಂಕ್ ಪಟ್ಟಿಗೆ ಪರಿಗಣಿಸಲಾಗುತ್ತದೆ.
ರ್ಯಾಂಕ್ ಪಟ್ಟಿಯನ್ನು ತಯಾರಿಸಲು ಕೆಲವು ದಿನ ಬೇಕಿದ್ದು, ಜುಲೈ 29 ಅಥವಾ 30ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ, ಜೂನ್ 18 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗಿದ್ದು, ಆ ವಿದ್ಯಾರ್ಥಿಗಳ ಫಲಿತಾಂಶ ಆಧರಿಸಿ ಈಗಾಗಲೇ ಸಿಇಟಿ ರ್ಯಾಂಕ್ ಪಟ್ಟಿಸಿದ್ಧಪಡಿಸಲಾಗಿದೆ. ಕೇಂದ್ರೀಯ ಪಠ್ಯಕ್ರಮದ ವಿದ್ಯಾರ್ಥಿಗಳ ರ್ಯಾಂಕ್ ಪಟ್ಟಿಯನ್ನು ಸಿದ್ಧಪಡಿಸಿದ ನಂತರ ಜುಲೈ ಅಂತ್ಯಕ್ಕೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.