
ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆ ಫಲಿತಾಂಶ ಜೂನ್ 15 ರಂದು ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ.
ಜೂನ್ 12 ರಂದು ಇಲ್ಲವೇ ಜೂನ್ 14ರಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿದ್ಧತೆ ಕೈಗೊಂಡಿದ್ದು, ಉನ್ನತ ಶಿಕ್ಷಣ ಸಚಿವರು ಲಭ್ಯವಿಲ್ಲದ ಕಾರಣ ಜೂನ್ 15 ರಂದು ಸಿಇಟಿ ಫಲಿತಾಂಶ ಪ್ರಕಟಣೆಗೆ ದಿನಾಂಕ ನಿಗದಿಪಡಿಸಲಾಗಿದೆ ಎಂದು ಹೇಳಲಾಗಿದೆ.
ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಸಿಇಟಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಆಧರಿಸಿ ರ್ಯಾಂಕ್ ಪಟ್ಟಿ ಸಿದ್ಧಪಡಿಸಲಾಗಿದ್ದು, ಫಲಿತಾಂಶ ಬಿಡುಗಡೆಗೆ ದಿನಾಂಕ ಅಂತಿಮಗೊಳಿಸಲಾಗಿದೆ. ಶೀಘ್ರವೇ ಅಧಿಕೃತ ಆದೇಶ ಹೊರ ಬೀಳುವ ನಿರೀಕ್ಷೆ ಇದೆ.