alex Certify CET Results 2022: ಜುಲೈ 17 ರಂದು ಸಿಇಟಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CET Results 2022: ಜುಲೈ 17 ರಂದು ಸಿಇಟಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇಲ್ಲ

ಬೆಂಗಳೂರು: ಸಿಬಿಎಸ್‍ಇ ಫಲಿತಾಂಶ ವಿಳಂಬ ಹಿನ್ನೆಲೆಯಲ್ಲಿ ಜುಲೈ 17 ರಂದು ಸಿಇಟಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇಲ್ಲವೆನ್ನಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ 2022 ನೇ ಸಾಲಿನ ಸಿಇಟಿ ಫಲಿತಾಂಶವನ್ನು ಈಗಾಗಲೇ ಘೋಷಣೆ ಮಾಡಿದಂತೆ ಜುಲೈ 17ರಂದು ಪ್ರಕಟಿಸುವ ಸಾಧ್ಯತೆ ಇತ್ತು. ಆದರೆ, ಜುಲೈ 17 ರೊಳಗೆ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶದ ಜೊತೆಗೆ ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿತ್ತು,

ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕೇಂದ್ರೀಯ ಪಠ್ಯಕ್ರಮ ಮಂಡಳಿಗಳಾದ ಸಿಬಿಎಸ್ಇ, ಐಸಿಎಸ್ಇ ಇನ್ನು ಫಲಿತಾಂಶವನ್ನು ಪ್ರಕಟಿಸಿಲ್ಲ. ಹೀಗಾಗಿ ಜುಲೈ 17 ರಂದು ಸಿಇಟಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇಲ್ಲವೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...