ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ 2023ರ ಎರಡನೇ ಮುಂದುವರೆದ ಸುತ್ತಿನ ವೇಳಾಪಟ್ಟಿ ಪ್ರಕಟಿಸಿದೆ.
ಸೆಪ್ಟೆಂಬರ್ 22ರ ಬೆಳಗ್ಗೆ 10 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ಆಯ್ಕೆಗಳನ್ನು ಸಲ್ಲಿಸಬಹುದಾಗಿದೆ. ಮೊದಲನೇ ಮತ್ತು ಎರಡನೇ ಸುತ್ತಿನಲ್ಲಿ ಸೀಟು ಪಡೆದುಕೊಂಡ ಅಭ್ಯರ್ಥಿಗಳು ತಮ್ಮ ಸೀಟುಗಳನ್ನು ರದ್ದು ಮಾಡಿಕೊಳ್ಳಲು ಸೆಪ್ಟಂಬರ್ 21ರ ಬೆಳಗ್ಗೆ 11 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಅಂತಹ ಅಭ್ಯರ್ಥಿಗಳಿಂದ 5000 ರೂ. ಕಡಿತ ಮಾಡಿ ಬಾಕಿ ಉಳಿದ ಮೊತ್ತವನ್ನು ಹಿಂತಿರುಗಿಸಲಾಗುವುದು.
ಸೆಪ್ಟಂಬರ್ 23ರಂದು ರಾತ್ರಿ 8 ಗಂಟೆಗೆ ಎರಡನೇ ಮುಂದುವರೆದ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಶುಲ್ಕ ಪಾವತಿ ಮತ್ತು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೆಪ್ಟೆಂಬರ್ 25 ರಿಂದ 27ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.