alex Certify ಸಿಇಟಿ ಸೀಟು ಹಂಚಿಕೆ, ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಸೀಟು ಹಂಚಿಕೆ, ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಿದೆ. 2020 ರ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿವಿಜ್ಞಾನ, ವೆಟರ್ನರಿ, ಫಾರ್ಮ ಸೈನ್ಸ್ ಕೋರ್ಸುಗಳ ಪ್ರವೇಶಕ್ಕೆ ಮೊದಲ ಸೀಟು ಹಂಚಿಕೆ ಮಾಡಿ ಫಲಿತಾಂಶ ಪ್ರಕಟಿಸಲಾಗಿದೆ.

ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಮುಂದಿನ ಸುತ್ತಿನಲ್ಲಿ ಭಾಗವಹಿಸಲು ನಿಗದಿಪಡಿಸಲಾದ ಅರ್ಹತೆ ಮತ್ತು ಮುಂದಿನ ಸುತ್ತುಗಳಲ್ಲಿ ಬರಬಹುದಾದ ಸೀಟುಗಳನ್ನು ಗಮನದಲ್ಲಿಟ್ಟುಕೊಂಡು ಪೋಷಕರ ಜೊತೆಗೆ ಚರ್ಚಿಸಿ ಸೂಕ್ತ ಆಯ್ಕೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಡಿಸೆಂಬರ್ 3 ರಂದು ಮಧ್ಯಾಹ್ನ 2 ಗಂಟೆಯಿಂದ ಡಿಸೆಂಬರ್ 5 ರಂದು ರಾತ್ರಿ 8 ಗಂಟೆಯವರೆಗೆ ಸೂಕ್ತವಾದ ಚಾಯ್ಸ್ ಮಾಡಿಕೊಳ್ಳಲು ಅವಕಾಶವಿರುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...