ಬೆಂಗಳೂರು: ಮೇ 20ರ ನಾಳೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ರಾಜ್ಯದ 592 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ.
ಮೇ 20, 21 ರಂದು ಸಿಇಟಿ ನಡೆಯಲಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಕೂಡ ನಾಳೆ ನಡೆಯಲಿದೆ.
ಒಂದೇ ದಿನ ಪ್ರಮಾಣ ವಚನ ಸ್ವೀಕಾರ ಸಮಾರಂಭ, ಸಿಇಟಿ ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಆತಂಕ ಎದುರಾಗಿದೆ. ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಈ ಭಾಗದಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಆತಂಕ ವ್ಯಕ್ತವಾಗಿದೆ.
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಗಿ ಭದ್ರತೆ ಕೈಗೊಳ್ಳಲಿದ್ದು, ಈ ಪ್ರದೇಶದ ಮಾರ್ಗಗಳಲ್ಲಿ ವಾಹನ ದಟ್ಟಣೆಯಿಂದಾಗಿ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗದಿರುವ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬಂದಿದೆ.
ಸಂಚಾರ ಪೊಲೀಸರಿಗೆ ಸೂಕ್ತ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್. ರಮ್ಯಾ ಹೇಳಿದ್ದಾರೆ.