alex Certify ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಸಿಇಟಿ ದಾಖಲಾತಿ ಪರಿಶೀಲನೆಗೆ ಡಿಜಿ ಲಾಕರ್ ಜೋಡಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಸಿಇಟಿ ದಾಖಲಾತಿ ಪರಿಶೀಲನೆಗೆ ಡಿಜಿ ಲಾಕರ್ ಜೋಡಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ದಾಖಲಾತಿ ಪರಿಶೀಲನೆಗೆ ವಿದ್ಯಾರ್ಥಿಗಳು ಡಿಜಿ ಲಾಕರ್ ಲಿಂಕ್ ಹಂಚಿಕೊಳ್ಳುವುದನ್ನು ಕಡ್ಡಾಯಗೊಳಿಸಲಿದೆ. ಈ ಮೂಲಕ ವಿದ್ಯಾರ್ಥಿಗಳ ಪ್ರಮಾಣಪತ್ರದ ನೈಜತೆ ಪರಿಶೀಲನೆ ನಡೆಸುವುದು ಮತ್ತಷ್ಟು ಸುಲಭವಾಗಲಿದೆ ಎಂದು ಹೇಳಲಾಗಿದೆ.

ಈ ವರ್ಷವೇ ವಿದ್ಯಾರ್ಥಿಗಳ ಪ್ರಮಾಣ ಪತ್ರ ನೈಜತೆ ಪರೀಕ್ಷಿಸಲು ಅನುಕೂಲವಾಗುವಂತೆ ಡಿಜಿ ಲಾಕರ್ ಲಿಂಕ್ ಮಾಡುವುದನ್ನು ಜಾರಿ ಮಾಡುವ ಸಾಧ್ಯತೆ ಇದೆ. ಸಿಇಟಿಗೆ ಸಲ್ಲಿಸಿದ್ದ ಅರ್ಜಿಯ ಪ್ರತಿ, ಸಿಇಟಿ ಮೂಲ ಪ್ರವೇಶಪತ್ರ, ಎಸ್ಎಸ್ಎಲ್ಸಿ ಮಾರ್ಕ್ಸ್ ಕಾರ್ಡ್. ಸೆಕೆಂಡ್ ಪಿಯುಸಿ ಮಾರ್ಕ್ಸ್ ಕಾರ್ಡ್, 7 ವರ್ಷದ ವ್ಯಾಸಂಗ ಪ್ರಮಾಣ ಪತ್ರ ದಾಖಲೆಗಳನ್ನು ಪರಿಶೀಲಿಸಲಾಗುವುದು.

ಜುಲೈ 7 ರಿಂದ 9 ರವರೆಗೆ ಸಿಇಟಿ ನಡೆಯಲಿದ್ದು ಕೊರೋನಾ ಸೋಂಕು ಪ್ರಕರಣ ಹೆಚ್ಚಾಗಿರುವುದರಿಂದ ಆನ್ಲೈನ್ ಪರಿಶೀಲನೆಗೆ ಒತ್ತು ನೀಡಲಾಗಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...