
ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಇಂದಿನಿಂದ ಆಪ್ಷನ್ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ.
2021 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ರ್ಯಾಂಕಿಂಗ್ ಪಡೆದಿರುವ ಅಭ್ಯರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದಾಖಲಾತಿ ಪಡೆಯಲು ಆಪ್ಷನ್ ಎಂಟ್ರಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಗ್ಗೆ ಮಾಹಿತಿ ನೀಡಿದ್ದು, ಆಪ್ಷನ್ ದಾಖಲಿಸಲು ನವೆಂಬರ್ 2 ರಂದು ಸಂಜೆ 4 ಗಂಟೆಯಿಂದ ಲಿಂಕ್ ಸಕ್ರಿಯಗೊಳಿಸಲಾಗುವುದು. ಹೆಚ್ಚಿನ ವಿವರಗಳಿಗೆ cetonline.karnataka.gov.in ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.