ದೆಹಲಿಯ ನಿಹಾಲ್ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಗಲು ದರೋಡೆ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯೊಬ್ಬರ ಸರವನ್ನು ಕಸಿದು ಪರಾರಿಯಾಗಿದ್ದಾರೆ.
ಗುರುನಾನಕ್ ವಿಹಾರ್, ಚಂದರ್ ವಿಹಾರ್‌ನಲ್ಲಿ ಈ ಘಟನೆ ಸಂಭವಿಸಿದೆ. ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಈ ಘಟನೆಯಿಂದ ಮಹಿಳೆ ಆಘಾತಕ್ಕೊಳಗಾಗಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನಾಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
निहाल विहार थाना इलाके में दिन दिहाड़े महिला की खींची चेन…बाइक सवार आरोपियों ने दिया वारदात को अंजाम…चंदर विहार के गुरु नानक विहार का मामला.. सीसीटीवी कैमरे में कैद हुई घटना pic.twitter.com/AitydvIoj9
— Gagandeep Singh (@GagandeepNews) March 19, 2025