
ಸ್ಯಾಂಡಲ್ ವುಡ್ ನಲ್ಲಿ ಗಾಯಕಿಯಾಗಿ ಮತ್ತು ಕಲಾವಿದೆಯಾಗಿ ಗುರುತಿಸಿಕೊಂಡಿರುವ ಚೈತ್ರ ಜೆ ಆಚಾರ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಶೇರ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ.
ನಟಿ ಚೈತ್ರ ಆಚಾರ್ ಇತ್ತೀಚಿಗಷ್ಟೇ ಹಾಟ್ ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳನ್ನು ತಮ್ಮ instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ.
2019ರಲ್ಲಿ ತೆರೆಕಂಡ ‘ಮಹಿರಾ’ ಎಂಬ ಆಕ್ಷನ್ ಥ್ರಿಲ್ಲರ್ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು ‘ಸಾರ್ವಜನಿಕರಿಗೆ ಸುವರ್ಣವಕಾಶ’ ಸಿನಿಮಾದ ”ನೀಲಾಕಾಶ ಕೇಳು” ಎಂಬ ಹಾಡಿಗೆ ಧ್ವನಿಗೂಡಿಸುವ ಮೂಲಕ ಗಾಯನ ಲೋಕಕ್ಕೆ ಪಾದಾರ್ಪಣೆ ಮಾಡಿದರು. ಇತ್ತೀಚಿಗೆ ‘ಸ್ಟ್ರಾಬೆರಿ’ ಮತ್ತು ‘ಹ್ಯಾಪಿ ಬರ್ತಡೆ ಟು ಮಿ’ ಚಿತ್ರದ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ

