ಬೆಂಗಳೂರು : ಆರೋಗ್ಯ ಸಮಸ್ಯೆಯ ನೆಪವೊಡ್ಡಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ‘ಚೈತ್ರಾ ಕುಂದಾಪುರ’ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸುಮಾರು 4 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಚೈತ್ರಾ ಕುಂದಾಪುರಗೆ ಎಲ್ಲಾ ರೀತಿಯ ಸ್ಕ್ಯಾನ್ ಮಾಡಲಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಹೇಳಿದ್ದರು. ಎಲ್ಲಾ ವರದಿ ನಾರ್ಮಲ್ ಬಂದ ಹಿನ್ನೆಲೆ ಇಂದು ಚೈತ್ರಾಳನ್ನು ಡಿಸ್ಚಾರ್ಜ್ ಮಾಡಲಾಗಿದೆ. ಈಕೆಯನ್ನು ಡಿಸ್ಚಾರ್ಜ್ ಮಾಡುತ್ತಿದ್ದಂತೆ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ, ಉದ್ಯಮಿ ಗೋವಿಂದ ಬಾಬುಗೆ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಗೋವಿಂದ ಬಾಬು ವಿರುದ್ಧವೇ ಜಾರಿ ನಿರ್ದೇಶನಾಲಯ (ಇಡಿ) ಗೆ ಪತ್ರ ಬರೆದಿದ್ದಾಳೆ ಎಂದು ತಿಳಿದು ಬಂದಿದೆ. ಅದೇ ರೀತಿ ಗೋವಿಂದ ಬಾಬು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಇಡಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಹಣದ ವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.