ಮಂಗಳೂರು : ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಗೆ ನಮ್ಮ ಮನೆಯಲ್ಲಿ ಆಶ್ರಯ ನೀಡಿರಲಿಲ್ಲ ಎಂದು ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಸ್ಪಷ್ಟನೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಆಕೆಗೆ ಕಳೆದ 7 ದಿನ ನಾನು ನಮ್ಮ ಮನೆಯಲ್ಲಿ ಆಶ್ರಯ ಕೊಟ್ಟಿದ್ದೆನೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ, ಆದರೆ ನಾನು ಆಶ್ರಯ ನೀಡಿರಲಿಲ್ಲ ಎಂದು ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಸ್ಪಷ್ಟನೆ ನೀಡಿದ್ದಾರೆ.
ನಾನು ಆಶ್ರಯ ನೀಡಿದ್ದರೆ ಪೊಲೀಸರು ವಿಚಾರಣೆಗೆ ಕರೆಯಬೇಕಿತ್ತಲ್ಲ..? ಸಿಸಿಬಿ ಪೊಲೀಸರಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಐದು ವರ್ಷದ ಹಿಂದಿನ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ . ಇದರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲ ನನಗೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದ್ದಾರೆ.ಸಿಸಿಬಿ ಪೊಲೀಸರಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಸುದ್ದಿವಾಹಿಗಳಲ್ಲಿ ಸುಳ್ಳು ಸುದ್ದಿ ಬರುತ್ತಿದೆ, ಇದರಿಂದ ನನಗೆ ಮಾನಸಿಕ ಹಿಂಸೆಯಾಗುತ್ತಿದೆ ಎಂದರು.
ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ 10 ದಿನ ಸಿಸಿಬಿ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.