ಬೆಂಗಳೂರು : ಚೈತ್ರಾ ಕುಂದಾಪುರ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಗೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವಂರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಜಿ ಪರಮೇಶ್ವರ್ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವವರಿಗೆ 3.5 ಕೋಟಿ ಕೋಟಿ ಹಣ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಇಂದಿರಾ ಕ್ಯಾಂಟಿನ್ ಬಿಲ್ ಬಾಕಿ ಇರೋ ಕಾರಣ ಷಡ್ಯಂತ್ರ ರಚನೆ ಮಾಡಲಾಗಿದೆʼʼ ಎಂದು ಚೈತ್ರಾ ಕುಂದಾಪುರ ಆರೋಪ ಮಾಡಿದ್ದಳು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರುಚೈತ್ರಾ ಕುಂ ದಾಪುರ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಇನ್ನೂ ಈ ಕೇಸ್ ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ ಎಂದರು.