ಬೆಂಗಳೂರು: ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ ಭೀತಿಯಲ್ಲಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಎ3 ಆರೋಪಿಯಾಗಿರುವ ಅಭಿನವ ಹಾಲಶ್ರೀ, ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಬಂಧನವಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದು, ಇದೀಗ ಅಜ್ಞಾತ ಸ್ಥಳದಿಂದಲೇ ಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಅಭಿನವ ಹಾಲಶ್ರೀ ಪರ ವಕೀಲರು 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಳೆ ಸೆ.16ರಂದು ಅರ್ಜಿ ವಿಚಾರಣೆ ನಡೆಯಲಿದೆ.
ಉದ್ಯಮಿ ಗೋವಿಂದ ಬಾಬು ಅವರಿಗೆ ವಂಚಿಸಿದ ಪ್ರಕರಣದಲ್ಲಿ ಅಭಿನವ ಹಾಲಶ್ರೀ ಮೂರನೇ ಆರೋಪಿಯಾಗಿದ್ದು, ಕೋಟ್ಯಂತರ ರೂಪಾಯಿ ಹಣ ದೋಚಿದ್ದಾರೆ ಎಂದು ತಿಳಿದುಬಂದಿದೆ.