ಬೆಂಗಳೂರು: ಉದ್ಯಮಿಯೊಬ್ಬರಿಗೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀ ಬಂಧನ ಬೆನ್ನಲ್ಲೇ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಅಭಿನವ ಹಾಲಶ್ರೀ ಮಠದಲ್ಲಿ 56 ಲಕ್ಷ ರೂಪಾಯಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಹಲವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಹಾಲಶ್ರೀ ಆಪ್ತರಾಗಿರುವ ತಿಪ್ಪೇಸ್ವಾಮಿ, ಲಕ್ಷ್ಮಣ, ಪ್ರಣವ ಪ್ರಸಾದ್ ಅವರಿಗೆ ನೋಟೀಸ್ ನೀಡಲಾಗಿದೆ. ಇನ್ನೊಂದೆಡೆ ಚೈತ್ರಾ ಕುಂದಾಪುರ ಆಪ್ತ ಮಂಜು ಎಂಬಾತನಿಗೂ ನೋಟಿಸ್ ನೀಡಲಾಗಿದೆ. ಎಲ್ಲರೂ ಇಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ನಡುವೆ ಮಠದಲ್ಲಿ 56 ಲಕ್ಷ ಹಣವಿಟ್ಟು ವಿಡಿಯೋ ಹೇಳಿಕೆ ನೀಡಿದ್ದ ಪ್ರಣವ ಪ್ರಸಾದ್, ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ನ ವಂಚನೆ ಪ್ರಕರಣ ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸಿದೆ.