ಬೆಂಗಳೂರು: ಉದ್ಯಮಿ ಗೋವಿಂದ ಬಾಬುಗೆ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ, ಇದೀಗ ಗೋವಿಂದ ಬಾಬು ವಿರುದ್ಧವೇ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪತ್ರ ಬರೆದಿದ್ದಾಳೆ.
ಉದ್ಯಮಿ ಗೋವಿಂದ ಬಾಬು ಅವರಿಂದಲೆ ಹಣ ಪಡೆದು ವಂಚಿಸಿರುವ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಇದೀಗ ಗೋವಿಂದ ಬಾಬು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಇಡಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಹಣದ ವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
5 ಕೋಟಿ ಹಣದ ಬಗ್ಗೆ ಗೋವಿಂದ ಬಾಬು ಆಪ್ತನೇ ನನಗೆ ಮಾಹಿತಿ ನೀಡಿದ್ದಾನೆ. ಹಣ ನೀಡಿದ ಬಗ್ಗೆ ನನ್ನ ಜೊತೆಯೂ ಗೋವಿಂದ ಬಾಬು ಚರ್ಚಿಸಿದ್ದಾರೆ. ಚುನಾವಣಾ ಟಿಕೆಟ್ ಗಾಗಿ ಹಣ ವರ್ಗಾಯಿಸಿದ್ದಾರೆ. ಮಂಜುನಾಥ್ ಗೆ 1 ಕೋಟಿ, ಅಭಿನವ ಹಾಲಶ್ರೀ ಸ್ವಾಮೀಜಿಗೆ 1.5 ಕೋಟಿ. ವಿಶ್ವನಾಥ್ ಜಿಗೆ 3 ಕೋಟಿ ನೀಡಿದ್ದಾಗಿ ನನ್ನ ಬಳಿ ಗೋವಿಂದ ಬಾಬು ಹೇಳಿದ್ದಾರೆ . ಈ ಬಗ್ಗೆ ಪೊಲೀಸರಿಗೆ ದೂರು ನೀಡುವಂತೆ ನಾನು ಗೋವಿಂದ ಬಾಬುಗೆ ಹೇಳಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಒಟ್ಟಾರೆ ಗೋವಿಂದ ಬಾಬು ವಿರುದ್ಧ ಚೈತ್ರಾ ಕುಂದಾಪುರ ಇಡಿಗೆ ಪತ್ರ ಬರೆದು ದೂರು ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ