ಬೆಂಗಳೂರು: ನದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಯುವ ಬ್ರಿಗೇಡ್ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಟಿ ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ನದಿ ಸ್ವಚ್ಛತೆಗೆ ಮುಂದಾಗಿದ್ದರು. ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಟಿ. ನರಸೀಪುರ ಪೊಲೀಸರ ನಡೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಬೇಸರ ವ್ಯಕ್ತಪಡಿಸಿದ್ದಾರೆ. ಯುವ ಬ್ರಿಗೇಡ್ ವತಿಯಿಂದ ನದಿ ಸ್ವಚ್ಛತೆ ಮಾಡುವುದು ಹೊಸತೇನೂ ಅಲ್ಲ, ಇದು ಯಾರಿಗೂ ಗೊತ್ತಿಲ್ಲದ ಸಂಗತಿಯೂ ಅಲ್ಲ ಎಂದು ಹೇಳಿದ್ದಾರೆ.
ಟಿ. ನರಸೀಪುರದಲ್ಲಿ ಆರೇಳು ವರ್ಷಗಳಿಂದ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಈ ವರ್ಷ ಅಚ್ಚರಿ ಎನ್ನುವಂತೆ ಪೊಲೀಸರು ನೋಟಿಸ್ ಹೊರಡಿಸಿದ್ದಾರೆ. ಕಾರ್ಯಕ್ರಮದ ಉಸ್ತುವಾರಿ ಯಾರು? ಎಷ್ಟು ಜನ? ಚಟುವಟಿಕೆ ಏನು? ಯಾರ್ಯಾರು ನದಿಗೆ ಇಳಿಯುತ್ತಾರೆ? ಎಂಬೆಲ್ಲಾ ಪ್ರಶ್ನೆಗಳನ್ನು ಕೇಳಿದ್ದಾರೆ. ನಡೆಯುವ ಅವಘಡಕ್ಕೆ ನೀವೇ ಕಾರಣವೆಂದು ಸಹ ಎಚ್ಚರಿಸುತ್ತಿದ್ದಾರೆ. ಯುವ ಬ್ರಿಗೇಡ್ ಚಟುವಟಿಕೆ ನಿಲ್ಲಿಸುವ ಹತಾಶ ಪ್ರಯತ್ನ ಮಾಡುತ್ತಿದ್ದಾರೆ. ಸ್ವಚ್ಛತಾ ಕಾರ್ಯಕ್ರಮ ದೊಡ್ಡದಾಗಿ ಮಾಡಬೇಕೆಂಬುದು ನಮ್ಮ ಬಯಕೆಯಾಗಿದೆ. ಯುವ ಬ್ರಿಗೇಡ್ ಸುಮ್ಮನಿರಲು ಸಾಧ್ಯವೇ? ಅಭಿಪ್ರಾಯಕ್ಕಾಗಿ ಕಾಯುವೆ ಎಂದು ಟ್ವೀಟ್ ಮೂಲಕ ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾಹಿತಿ ಹಂಚಿಕೊಂಡಿದ್ದಾರೆ.