alex Certify BREAKING NEWS: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿಯವರನ್ನು ನೇಮಕ ಮಾಡಲಾಗಿದೆ.

ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ವಿಪಕ್ಷ ನಾಯಕನ ಸ್ಥಾನಕ್ಕೆ ಹಲವರು ಆಕಾಂಕ್ಷಿಗಳಾಗಿದ್ದರು. ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿರುವ ಛಲವಾದಿ ನಾರಾಯಣಸ್ವಾಮಿಯವರನ್ನು ನೇಮಕ ಮಾಡಲಾಗಿದೆ.

ಸಿ.ಟಿ. ರವಿ, ಎನ್. ರವಿಕುಮಾರ್ ಸೇರಿದಂತೆ ಹಲವರು ವಿಪಕ್ಷ ನಾಯಕನ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದರು. ಬಿಜೆಪಿ ವರಿಷ್ಠರು ಛಲವಾದಿ ನಾರಾಯಣಸ್ವಾಮಿಯವರನ್ನು ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಆಯ್ಕೆ ಮಾಡಿದ್ದಾರೆ. ಈ ಮೂಲಕ ಎಸ್.ಸಿ. ಸಮುದಾಯಕ್ಕೆ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕ ಸ್ಥಾನ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂ. ಗುಳುಂ, ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣಿ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

ಛಲವಾದಿ ನಾರಾಯಣ ಸ್ವಾಮಿಯವರನ್ನು ಆತ್ಮೀಯವಾಗಿ ಅಭಿನಂಧಿಸಿ ಅವರನ್ನು ಆಯ್ಕೆಮಾಡಿದ ಪಕ್ಷದ ವರಿಷ್ಠ  ಮಂಡಳಿಗೆ ಕೃತಜ್ಞತೆ ಸಲ್ಲಿಸುವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...