
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿನೋವಿನಿಂದ ಬಳಲುತ್ತಿದ್ದು, ವ್ಹೀಲ್ ಚೇರ್ ನಲ್ಲಿಯೇ ಒಡಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿ ನೋವಿನ ಬಗ್ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ನೀವು ನಮ್ಮ ಜನರಿಗೆ ಅನ್ಯಾಯ ಮಾಡಿದ್ದಕ್ಕೆ ಇಂದು ಕುಂಟುತ್ತಿದ್ದೀರಿ. ನಮ್ಮವರ ಹಣ ದುರುಪಯೋಗ ಮಾಡಿಕೊಂಡಿದ್ದೀರಿ. 25 ಸಾವಿರ ಕೋಟಿ ದಲಿತರ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿದ್ದಾರೆ.
ದಲಿತರ ಹಣ ದುರುಪಯೋಗ ಮಾಡಿಕೊಂಡಿದ್ದಕ್ಕೆ ಇಂದು ವ್ಹೀಲ್ ಚೇರ್ ನಲ್ಲಿ ಬರುವಂತಾಗಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಛಲವಾದಿ ನಾರಾಯಾಣಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.