ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ ಕಳೆದ ವರ್ಷ ಬಾಕ್ಸಾಫೀಸ್ ಕೊಳ್ಳೆ ಹೊಡೆಯುವ ಮೂಲಕ ಭರ್ಜರಿ ಯಶಸ್ಸು ಕಂಡಿದ್ದು ಇದೀಗ ಡೆವಿಲ್ ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ. ಇಂದು ಡೆವಿಲ್ ಚಿತ್ರತಂಡ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಇದೇ ಡಿಸೆಂಬರ್ 25 ಕ್ರಿಸ್ಮಸ್ ಹಬ್ಬದ ದಿನದಂದು ಡೆವಿಲ್ ಸಿನಿಮಾ ತೆರೆ ಮೇಲೆ ಬರಲಿದೆ. ಈ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಈ ಚಿತ್ರವನ್ನು ಪ್ರಕಾಶ್ ವೀರ್ ನಿರ್ದೇಶಿಸಿದ್ದು, ಜೈ ಮಾತ ಕಂಬೈನ್ ಬ್ಯಾನರ್ ನಲ್ಲಿ ಜೆ ಜಯಮ್ಮ ನಿರ್ಮಾಣ ಮಾಡಿದ್ದಾರೆ.
ರಜನಿ ಸ್ಲೋಕನಾಥ್, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದು ಸುಧಾಕರ್ ಎಸ್ ರಾಜ್ ಛಾಯಾಗ್ರಹಣವಿದೆ. ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ತೆರೆ ಮೇಲೆ ಬರಬೇಕಿತ್ತು ಕಾರಣಾಂತರದಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.
https://twitter.com/dasadarshan/status/1793501115117674933?ref_src=twsrc%5Etfw%7Ctwcamp%5Etweetembed%7Ctwterm%5E1793501115117674933%7Ctwgr%5E2bb4b62d32ff1abe3e1060e5ef6e1ddef159edea%7Ctwcon%5Es1_&ref_url=https%3A%2F%2Ftv9kannada.com%2Fentertainment%