alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬರ ಪರಿಹಾರ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬರ ಪರಿಹಾರ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ

ರಾಯಚೂರು: ಮುಂಗಾರು ಮತ್ತು ಹಿಂಗಾರಿಗೆ ಪ್ರತ್ಯೇಕ ಪರಿಹಾರ ನೀಡುವ ಕುರಿತಂತೆ ನವೆಂಬರ್ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ರಾಯಚೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಅನುದಾನ ಬಿಡುಗಡೆ ಮಾಡಿಲ್ಲ. ಕೇಂದ್ರ ಅನುದಾನ ಬಿಡುಗಡೆ ಮಾಡಿದಲ್ಲಿ ರಾಜ್ಯ ಸರ್ಕಾರದಿಂದಲೂ ಸೇರಿಸಿ ಪರಿಹಾರ ವಿತರಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಫಸಲ್ ಭೀಮಾ ಯೋಜನೆಯಡಿ ಬೇರೆಯವರ ಖಾತೆಗೆ ಹಣ ಜಮಾ ಆಗಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಮುಂದಿನ ವರ್ಷದಿಂದ ರಾಷ್ಟ್ರೀಯ ಫಸಲ್ ಭೀಮಾ ಯೋಜನೆಯಲ್ಲಿ ಬದಲಾವಣೆ ತರಲಿದ್ದು, ಒಂದು ವರ್ಷಕ್ಕೆ ಸೀಮಿತವಾಗಿ ಯೋಜನೆ ರೂಪಿಸಲಾಗುವುದು. ಪರಿಣಾಮಕಾರಿಯಾಗಿ ಯೋಜನೆ ಜಾರಿಗೊಳಿಸಲಿದ್ದು, ರೈತರಿಗೆ ಯಾವುದೇ ತೊಂದರೆಯಾಗಲು ಸರ್ಕಾರ ಬಿಡುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...