alex Certify ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ಪಡೆ, ಮಂಡ್ಯದಿಂದ ಸ್ಪರ್ಧೆ ಬಗ್ಗೆ ಚರ್ಚೆಯೇ ಆಗಿಲ್ಲ: ಚಲುವರಾಯಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ಪಡೆ, ಮಂಡ್ಯದಿಂದ ಸ್ಪರ್ಧೆ ಬಗ್ಗೆ ಚರ್ಚೆಯೇ ಆಗಿಲ್ಲ: ಚಲುವರಾಯಸ್ವಾಮಿ

ಮಂಡ್ಯ:  ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನನಗೂ ಮತ್ತು ಬೇರೆಯವರಿಗೂ ಕೆಲವು ವ್ಯತ್ಯಾಸಗಳು ಇವೆ. ಹೀಗಾಗಿ ಚರ್ಚೆ ಆಗದ ವಿಚಾರವನ್ನು ಪ್ರಸ್ತಾಪಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಸುಮಲತಾ ಅವರು ಕಾಂಗ್ರೆಸ್ ಸೇರ್ಪಡೆಗೆ ಡಿ.ಕೆ. ಶಿವಕುಮಾರ್ ವಿರೋಧದ ಬಗ್ಗೆ ನನಗೆ ಗೊತ್ತಿಲ್ಲ. ಗೆದ್ದ ನಂತರ ಸುಮಲತಾ ಅವರು ನನ್ನ ಬಳಿ ರಾಜಕಾರಣ ಚರ್ಚೆ ಮಾಡಿಲ್ಲ. ಆಗಾಗ ಆಕಸ್ಮಿಕವಾಗಿ ಭೇಟಿಯಾದ ಸಂದರ್ಭದಲ್ಲಿ ವಿಶ್ವಾಸದಲ್ಲಿ ಮಾತನಾಡಿದ್ದೇವೆ ಅಷ್ಟೇ ಎಂದು ಹೇಳಿದ್ದಾರೆ.

ಕೆಲವು ಕಡೆ ಸ್ಪರ್ಧಿಸಿ ಎಂದು ಸಚಿವರಿಗೆ ಹೈಕಮಾಂಡ್ ಹೇಳಿದ್ದು ಸತ್ಯ. ಆದರೆ, ಮಂಡ್ಯ ಲೋಕಸಭೆ ಕ್ಷೇತ್ರದ ವಿಚಾರದಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...