ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ದೇವಲಾಪುರದಲ್ಲಿ ಜನವರಿ 14ರಂದು ಮಕರ ಸಂಕ್ರಾಂತಿ ಹಬ್ಬದ ದಿನ ರಾಜ್ಯಮಟ್ಟದ ಸಿರಿಧಾನ್ಯ ಮೇಳದ ಪ್ರಯುಕ್ತ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮೊದಲ ಬಾರಿಗೆ ರೈತರೊಂದಿಗೆ ಸಂಕ್ರಾಂತಿ ಆಚರಿಸಲಿದ್ದಾರೆ.
ದೇವಲಾಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ, ಮಹಿಳೆಯರಿಗಾಗಿ ಸಿರಿಧಾನ್ಯ ಪಾಕ ಸ್ಪರ್ಧೆ, ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ.
ಮಟ್ಟಿ ಕುಸ್ತಿ, ಕಬಡ್ಡಿ ಇತರೆ ಗ್ರಾಮೀಣ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸಮಾರಂಭಕ್ಕೆ ಮುನ್ನ ನಡೆಯುವ ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು ಭಾಗವಹಿಸಲಿವೆ.